June 24, 2008

ಕರಾವಳಿ ಪ್ರವಾಸೋದ್ಯಮಕ್ಕೆ ಆದ್ಯತೆ: ಮುಖ್ಯಮಂತ್ರಿ


ಕರಾವಳಿ ಪ್ರದೇಶದ ಜನತೆ ತಮ್ಮ ಸರಕಾರದ ಮೇಲೆ ದೊಡ್ಡ ನಿರೀಕ್ಷೆ ಇಟ್ಟಿದ್ದಾರೆ. ಅವರ ನಿರೀಕ್ಷೆ ಹುಸಿ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಭರವಸೆ ನೀಡಿದ್ದಾರೆ.

‘ಉದಯವಾಣಿ’ಗೆ ನೀಡಿದ ಸಂದರ್ಶನದಲ್ಲಿ ಈ ವಿಷಯ ತಿಳಿಸಿದ ಅವರು, ಕಳೆದ ಎರಡು ದಶಕಗಳ ಅವಧಿಯಲ್ಲಿ ಕರಾವಳಿ ಪ್ರದೇಶ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಅಲ್ಲಿನ ರಸ್ತೆಗಳು ಹಾಳಾಗಿವೆ. ಕಡಲ ಕೊರೆತದಿಂದ ಜನ ತೊಂದರೆಗೆ ಒಳಗಾಗಿದ್ದಾರೆ. ಪ್ರವಾಸೋದ್ಯಮ ಮತ್ತು ಕೈಗಾರಿಕೆಗೆ ಇರುವ ಅವಕಾಶ ವನ್ನು ಸರಿಯಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಇದನ್ನು ಗಮನದ ಲ್ಲಿಟ್ಟುಕೊಂಡು ಕರಾವಳಿ ಅಭಿವೃದ್ಧಿಗೆ ಗಮನ ನೀಡುವುದಾಗಿ ತಿಳಿಸಿದರು.

ಕರಾವಳಿ ಜಿಲ್ಲೆಯ ಜನತೆ ಬಿಜೆಪಿಗೆ ದೊಡ್ಡ ಪ್ರಮಾಣದ ಬೆಂಬಲ ನೀಡಿದ್ದಾರೆ. ಆದ್ದರಿಂದ ಅವರ ನಿರೀಕ್ಷೆಯನ್ನು ನನ್ನ ಸರಕಾರ ಸುಳ್ಳು ಮಾಡುವುದಿಲ್ಲ ಎಂದ ಯಡಿ ಯೂರಪ್ಪ, ವಿಶೇಷವಾಗಿ ಗಣಿಗಾರಿಕೆ ಲಾರಿಗಳಿಂದ ರಸ್ತೆಗಳು ಹಾಳಾಗು ವುದನ್ನು ತಪ್ಪಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

No comments: